ಮೈಸೂರು

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಪರಾರಿ

ಮೈಸೂರು,ಜೂ.18:- ಕೆ.ಆರ್.ಎಸ್.ರಸ್ತೆಯಲ್ಲಿರುವ ಚೆಲುವಾಂಬ ಪಾರ್ಕ್ ಹತ್ತಿರ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು, ಕಾರು ಚಾಲಕ ಕಾರನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಮದ್ಯಪಾನ ಮಾಡಿ ಕಾರು ಚಲಾಯಿಸಿರಬೇಕೆಂಬ ಅನುಮಾನ ವ್ಯಕ್ತವಾಗಿದೆ.  ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ವಿ.ವಿ.ಪುರಂ ಸಂಚಾರಿ  ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: