ಮೈಸೂರು

ಬೆಟ್ಟಕ್ಕೆ ಮತ್ತೆ ಖಾಸಗಿ ವಾಹನ ಸಂಚಾರ ನಿಷೇಧ

ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮತ್ತೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದೆ. ಲಲಿತ್‍ಮಹಲ್ ಹೆಲಿಪ್ಯಾಡ್‍ನಿಂದ ಉಚಿತ ಪ್ರಯಾಣದ ಬಸ್‍ ಸೇವೆಯನ್ನು ಪುನರಾರಂಭಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ನಿರೀಕ್ಷಿತ ಪ್ರವಾಸಿಗರು ಬಂದಿಲ್ಲ ಎಂಬ ಕಾರಣದಿಂದ ಖಾಸಗಿ ವಾಹನ ಪ್ರವೇಶ ನಿರ್ಬಂಧವನ್ನು ತೆಗೆದುಹಾಕಿ ಪ್ರವೇಶ ಮುಕ್ತಗೊಳಿಸಿತ್ತು. ಆದರೆ, ಈಗ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಬೆಟ್ಟದ ಮೇಲೆ ವಾಹನ ನಿಲುಗಡೆಗೆ ಸ್ಥಳಾವಕಾಶದ ಕೊರತೆಯಿದೆ. ಹಾಗಾಗಿ ಖಾಸಗಿ ವಾಹನಗಳನ್ನು ಚಾಮುಂಡಿಬೆಟ್ಟದ ತಾವರೆಕಟ್ಟೆ ಬಳಿಯಿಂದ ಚಾಮುಂಡಿಬೆಟ್ಟಕ್ಕೆ ಸಂಚರಿಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಅ.8ರಿಂದ 16ರವರೆಗೆ ಬೆಳಗ್ಗೆ 6ರಿಂದ ರಾತ್ರಿ 8.30ರವರೆಗೆ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.

Leave a Reply

comments

Related Articles

error: