
ಮೈಸೂರು
ಪಾದಚಾರಿಗೆ ವಾಹನ ಡಿಕ್ಕಿ : ಗಾಯ
ಮೈಸೂರು,ಜೂ.19:- ಪಾದಚಾರಿಗೆ ದ್ವಿಚಕ್ರವಾಹನದಲ್ಲಿ ಬಂದ ಸವಾರನೋರ್ವ ಡಿಕ್ಕಿ ಮಾಡಿ ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ಮಹಿಳೆಯೋರ್ವರು ವಿ ವಿ ಪುರಂ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಗವೇಣಿ ಎಂಬವರೇ ದೂರು ನೀಡಿದವರಾಗಿದ್ದಾರೆ. ಜೂ.15-06 ರಂದು ರಾತ್ರಿ 10ರ ಸುಮಾರಿಗೆ ತಂದೆ ಪ್ರಕಾಶ್ ಬಿ ಎಂಬವರು ವಿಕ್ರಾಂತ್ ಹಿಂಭಾಗದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ KA-55, K-3505 ಪಲ್ಸರ್ ಮೋಟಾರ್ ಸೈಕಲ್ ನಲ್ಲಿ ಬಂದ ವಾಹನ ಸವಾರ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಚಾಲನೆ ಮಾಡಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ ಪ್ರಕಾಶ್ ರವರಿಗೆ ಡಿಕ್ಕಿ ಮಾಡಿದ ಪರಿಣಾಮ ಅವರು ಬಿದ್ದು ಗಾಯಗೊಂಡಿದ್ದಾರೆ. ಸಾರ್ವಜನಿಕರ ಸಹಾಯದಿಂದ ಆಂಬ್ಯೂಲೆನ್ಸ್ ನಲ್ಲಿ ಚಿಕಿತ್ಸೆಗೆ ಬೃಂದಾವನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆನ್ನು ಮೂಳೆಗೆ ಪೆಟ್ಟು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸವಾರನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ. (ಕೆ.ಎಸ್,ಎಸ್.ಎಚ್)