ಮೈಸೂರು

ಹರೀಶ್ ಸಾಂತ್ವನ ಯೋಜನೆ : ಅರ್ಜಿ ಆಹ್ವಾನ

ಮೈಸೂರು.ಜೂ.19 :  ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆಯಡಿ ರಾಜ್ಯ ವ್ಯಾಪ್ತಿಯಲ್ಲಿ ಘಟಿಸಿದ ರಸ್ತೆ ಅಪಘಾತದ ಗಾಯಾಳುಗಳಿಗೆ 48 ಗಂಟೆಗಳವರೆಗೆ ಗರಿಷ್ಠ ರೂ. 25,000/- ವರೆಗೆ ಉಚಿತ ತುರ್ತು ಚಿಕಿತ್ಸೆ ಒದಗಿಸಲಾಗುವುದು.
ಅಪಘಾತ ಸಮಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಹಾಗೂ ಅಪಘಾತದ ಸಂದರ್ಭದಲ್ಲಿ ತಕ್ಷಣದ ಚಿಕಿತ್ಸೆ ಒದಗಿಸಲು ಹಾಗೂ ಜೀವ ಉಳಿಸಲು ನೆರವಾಗುವವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರಾಜ್ಯ ವ್ಯಾಪ್ತಿಯೊಳಗಿನ ರಸ್ತೆ ಅಪಘಾತದ ಗಾಯಾಳುಗಳಿಗೆ ಸಹಾಯ ಮಾಡಲು ಶ್ರಮಿಸುವ ಯಾವುದೇ ವಯಸ್ಸಿನ ವ್ಯಕ್ತಿ/ಯಾವುದೇ ರಾಷ್ಟ್ರೀಯತೆಯ ವ್ಯಕ್ತಿ, ರಸ್ತೆ ಅಪಘಾತ ಗಾಯಾಳುಗಳಿಗೆ ನೆರವಾದ ಅಥವಾ ಜೀವ ಉಳಿಸಲು ಶ್ರಮಿಸಿದ ವ್ಯಕ್ತಿ ಪ್ರಶಸ್ತಿಗಾಗಿ ಸ್ವಯಂ ರೂಪದಲ್ಲಿ ಅಥವಾ ಸಾಕ್ಷಿಯಾದ ವ್ಯಕ್ತಿಯಿಂದ ನಾಮಕರಣಗೊಳ್ಳಬಹುದು.
ಜಿಲ್ಲಾ ಜೀವರಕ್ಷಕ ಪ್ರಶಸ್ತಿ ಸಮಿತಿಯು ಪರಿಶೀಲಿಸಿ ಮಾರ್ಗಸೂಚಿಗಳ ಅನ್ವಯ ಮೌಲ್ಯಮಾಪನ ನಡೆಸಿ ವ್ಯಕ್ತಿಗಳು ನೀಡಿದ ಸಹಾಯ ಹಾಗೂ ಸದರಿ ಸಹಾಯದಿಂದ ಉಂಟಾದ ಉತ್ತಮ ಪರಿಣಾಮ ಮುಂತಾದವುಗಳನ್ನು ಆಧರಿಸಿ, ಪ್ರಶಸ್ತಿಗಳನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಎಂದು ವಿಭಾಗಿಸಿ ಘೋಷಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಳಿಗೆ ಜಿಲ್ಲಾ ಸಂಯೋಜಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ದೂರವಾಣಿ ಸಂಖ್ಯೆ 7259003400 ನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: