ಮೈಸೂರು

ಅಪಘಾತ: ಬೈಕ್ ಸವಾರ ಸಾವು

ಮೈಸೂರು,ಜೂ.20- ಸಿಮೆಂಟ್ ತುಂಬಿದ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ನೆರಳೆ ಗ್ರಾಮದ ಸ್ವಾಮಿ (38) ಮೃತ ಪಟ್ಟ ವ್ಯಕ್ತಿ. ತಾಲ್ಲೂಕಿನ ನೆರಳೆ ಗಣೇಶನ ಗುಡಿ ಹತ್ತಿರ ಅಪಘಾತ ನಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗ್ರಾಮಸ್ಥರು ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಪ್ರತಿಭಟನಾಕಾರರು ಅಗ್ರಹಿಸಿದ್ದಾರೆ. ಸ್ಥಳಕ್ಕೆ ಎಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಆರ್.ವಿ, ಎಸ್.ಎನ್,ಎಂ.ಎನ್)

Leave a Reply

comments

Related Articles

error: