ದೇಶಪ್ರಮುಖ ಸುದ್ದಿ

ರಾಜ್ಯಪಾಲರ ಹುದ್ದೆಗೆ ರಾಮನಾಥ್ ಕೋವಿಂದ್ ರಾಜೀನಾಮೆ

ನವದೆಹಲಿ, ಜೂ.20 : ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಬಿಹಾರದ ರಾಜ್ಯಪಾಲ ರಾಮ್ನಾಥ್ ಕೋವಿಂದ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಗೀಕರಿಸಿದ್ದಾರೆ.

ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗಾಗಿ ಜೂನ್ 23 ರ ಬೆಳಿಗ್ಗೆ 11 ಗಂಟೆಗೆ ರಾಮ್ನಾಥ್ ಕೋವಿಂದ್ ಅವರು ನಾಮಪತ್ರ ಸಲ್ಲಿಸಲಿದ್ದಾರೆಂದು ಹೇಳಲಾಗಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿವೆ. ರಾಮ್ನಾಥ್ ಕೋವಿಂದ್ ಅವರು ದೆಹಲಿಯಲ್ಲಿದ್ದು, ಬಿಜೆಪಿ ನಾಯಕರು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ಬಿಹಾರದ ಉಸ್ತುವಾರಿ ರಾಜ್ಯಪಾಲರಾಗಿ ಜವಾಬ್ದಾರಿ ವಹಿಸಲಾಗಿದೆ.

-ಎನ್.ಬಿ.

Leave a Reply

comments

Related Articles

error: