ಕರ್ನಾಟಕ

ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ರಾಜ್ಯ(ಬೆಂಗಳೂರು)ಜೂ.20:-  ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ವಿವೇಕ್ ನಗರದ ಅಶೋಕ್ ಕುಮಾರ್ ಗುಪ್ತ (50) ಎಂದು ಗುರುತಿಸಲಾಗಿದೆ. ಬಂಧಿತನಿಂದ ಹೆಸರು ನಮೂದಿಸದ ಚೆಕ್‌ಗಳು, ಆರ್‌ಸಿ ಬುಕ್‌ಗಳು, ಸ್ಮಾರ್ಟ್ ಕಾರ್ಡ್‌ಗಳು, ಖಾಲಿ ದಾಸ್ತಾವೇಜು ಪತ್ರಗಳು ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ವಿವೇಕನಗರದ 8ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: