ಸುದ್ದಿ ಸಂಕ್ಷಿಪ್ತ

ಬಾಕಿ ಪಾವತಿಗೆ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದಿಂದ ಒತ್ತಾಯ

ಮೈಸೂರು.ಜೂ.20 : 2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಮೈಸೂರು ಮಹಾನಗರ ಪಾಲಿಕೆಯೂ ಸುಮಾರು 130 ಕೋಟಿ ರೂಪಾಯಿ ಬಾಕಿಯನ್ನು ಗುತ್ತಿಗೆದಾರರಿಗೆ ನೀಡಬೇಕಿದೆ, ಈ ಬಗ್ಗೆ ಪಾಲಿಕೆ ಆಯುಕ್ತರಿಗೆ ಮಾಡಿದ ಮನವಿಗೆ ಸ್ಪಂದಿಸಿ 2013 ರಿಂದ 15ರವರೆಗೆ ಸುಮಾರು 19 ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದಾರೆ, ಈಗ ಉಳಿದಿರುವ ಬಿಲ್ ನ್ನು ಜೇಷ್ಠಾತೆ ಆಧಾರದ ಮೇಲೆ ಪಾವತಿಸಬೇಕೆಂದು ಮನವಿ ಮಾಡಲಾಗಿದೆ. ಇಲ್ಲವಾದಲ್ಲಿ ಮುಂದೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಚಂದ್ರಶೇಖರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: