ಮೈಸೂರು

ಗಿನ್ನೀಸ್ ಯೋಗ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ರಂದೀಪ್

ಮೈಸೂರು, ಜೂ.೨೦: ಸಾಂಸ್ಕೃತಿಕ ರಾಜಧಾನಿ ಮೈಸೂರು ಯೋಗ ರಾಜಧಾನಿಯಾಗಲು ವೇದಿಕೆ ಸಿದ್ಧವಾಗಿದ್ದು, ಜೂ.೨೧ರಂದು ರೇಸ್‌ಕೋರ್ಸ್ ಮೈದಾನದಲ್ಲಿ ನಡೆಯುವ ಸಾಮೂಹಿಕ ಯೋಗಾಭ್ಯಾಸಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಸುಮಾರು ೫೦ ಸಾವಿರಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಿನ್ನೀಸ್ ದಾಖಲೆ ಬರೆಯುವ ನಿರೀಕ್ಷೆ ಇದ್ದು, ವೇದಿಕೆ, ಆಸನಗಳು, ಧ್ವನಿವರ್ಧಕ, ಸೂಚನಾ ಫಲಕ ಸೇರಿದಂತೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಸಂಬಂಧ ರೇಸ್‌ಕೋರ್ಸ್ ಮೈದಾನದಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಸಿದ್ಧತೆ ಪರಿಶೀಲಿಸಿದರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಮಂದಿ ಭಾಗವಹಿಸುವುದರಿಂದ ಅವರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ೪೫ ವೇದಿಕೆಗಳನ್ನು ನಿರ್ಮಿಸಲಾಗುತ್ತಿದ್ದು ತರಬೇತುದಾರರು ನೀಡುವ ಮಾಹಿತಿ ಎಲ್ಲರಿಗೂ ಕಾಣುವಂತಿರಬೇಕು. ಅಲ್ಲದೆ ತರಬೇತುದಾರರು ನೀಡುವ ಸೂಚನೆಗಳು ಏಕಕಾಲಕ್ಕೆ ಎಲ್ಲರಿಗೂ ಕೇಳಿಸುವಂತೆ ಸೂಕ್ತ ಧ್ವನಿವರ್ಧಕ ವ್ಯವಸ್ಥೆ ಮಾಡಬೇಕು. ಮೈದಾನ ಪ್ರವೇಶಿಸುವ ಎಲ್ಲಾ ದ್ವಾರಗಳಲ್ಲು ಬಾರ್‌ಕೋಡಿಂಗ್ ವ್ಯವಸ್ಥೆ ಮಾಡಲಾಗಿದ್ದು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ಮುಂಜಾಗ್ರತಾ ಕ್ರಮವಾಗಿ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಕಾ.ರಾಮೇಶ್ವರಪ್ಪ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಸೇರಿದಂತೆ ಇನ್ನಿತರರು ಇದ್ದರು. (ವರದಿ ಬಿ.ಎಂ)

Leave a Reply

comments

Related Articles

error: