ಕರ್ನಾಟಕ

ರೈತರು ಇಲಾಖೆಯ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಮುನ್ನಡೆಯಿರಿ : ಎಚ್.ತ್ಯಾಗರಾಜು

ರಾಜ್ಯ(ಮಂಡ್ಯ)ಜೂ.20:- ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಕೃಷಿ ರೈತ ಸಂಪರ್ಕ ಕೇಂದ್ರದ ಆವರಣದಿಂದ ಹೊರಟ ಸಮಗ್ರ ಕೃಷಿ ಅಭಿಯಾನ ರಥಕ್ಕೆ ಜಿಪಂ ಸದಸ್ಯ ಎಚ್.ತ್ಯಾಗರಾಜು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಕೃಷಿ, ರೇಷ್ಮೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಯಿಂದ ಕೃಷಿ ಪದ್ದತಿಯ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಮಗ್ರ ಕೃಷಿ ಅಭಿಯಾನ ರಥದ ಮೂಲಕ ಹಳ್ಳಿಗಳಿಗೆ ತೆರಳಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ರೈತರು ಇಲಾಖೆಯ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಮುನ್ನಡೆಯಬೇಕು ಎಂದು ಮನವಿ ಮಾಡಿದರು.
ರೈತರು ಅಪ್ಪಹಾಕಿದ ಆಲದ ಮರದಂತೆ ಸಾಂಪ್ರದಾಯಿಕ ಬೇಸಾಯ ಪದ್ದತಿಗೆ ಜೋತುಬಿದ್ದು ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ರೈತರು ಇಲಾಖೆಗಳಿಂದ ಸಮಗ್ರ ಮಾಹಿತಿ ಪಡೆದು ಹೊಸ ಹೊಸ ಸಮಗ್ರ ಬೇಸಾಯ ಪದ್ದತಿಗೆ ಮುಂದಾಗಬೇಕು ಎಂದು ಹೇಳಿದರು. ಇಲಾಖೆಯ ಅಧಿಕಾರಿಗಳು ಕೂಡ ತಮ್ಮ ಇಲಾಖೆಗಳಿಂದ ಸಿಗುವಂತಹ ಯೋಜನೆ, ಸವಲತ್ತುಗಳ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡುವ ಮೂಲಕ ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಮನ್‍ಮುಲ್ ಉಪಾಧ್ಯಕ್ಷ ಜಿ.ಇ.ರವಿಕುಮಾರ್, ತಾಪಂ ಸದಸ್ಯ ರಾಮೇಗೌಡ, ಕೃಷಿ ಅಧಿಕಾರಿಗಳಾದ ಗಿರೀಶ್‍ಗೌಡ, ಆಶಾ, ರೇಷ್ಮೆ ಅಧಿಕಾರಿ ರಂಗಪ್ಪ, ಮುಖಂಡರಾದ ಉಮೇಶ್, ದೊರೆಸ್ವಾಮಿ, ಬೋರೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: