ಮೈಸೂರು

ಕೇಬಲ್ ವೈರ್ ಗೆ ಟಿಪ್ಪರ್ ಲಾರಿ ಡಿಕ್ಕಿ : ಉರುಳಿದ ವಿದ್ಯುತ್ ಕಂಬ; ತಪ್ಪಿದ ಅನಾಹುತ

ಮೈಸೂರು,ಜೂ.20:-  ರಸ್ತೆಯ ಮೇಲ್ಭಾಗದಲ್ಲಿ ಹಾದು ಹೋಗಿದ್ದ ಕೇಬಲ್ ವೈರ್ ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ವಿದ್ಯುತ್ ಕಂಬವೊಂದು ಮುರಿದು ಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಜೆ.ಎಲ್.ಬಿ ರಸ್ತೆಯ ಮುಡಾ ಕಚೇರಿ ಬಳಿ ರೈಲ್ವೆ ಇಲಾಖೆಗೆ ಸೇರಿದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಿದ್ಯುತ್  ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ವಿದ್ಯುತ್ ಕಂಬ ಮುರಿದು ಬೀಳುತ್ತಿದ್ದಂತೆ, ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದರಿಂದ ಅನಾಹುತ ತಪ್ಪಿದ್ದು,  ಘಟನಾ ಸ್ಥಳದ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರು, ಚೆಸ್ಕಾಂ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ದೌಡಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: