ಮೈಸೂರು

ಅಕ್ಟೋಬರ್ 22: ಸಶಸ್ತ್ರ ಪಡೆಗಳ ಯೋಧರಿಗೆ ಕಾನೂನು ಅರಿವು

ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಶಸ್ತ್ರ ಪಡೆಗಳ ಯೋಧರಿಗೆ ಕಾನೂನಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ಮುಜೀರುಲ್ ಮಾತನಾಡಿ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಯಂತ್ ಪಟೇಲ್, ಕೊಚ್ಚಿಯ ಸಶಸ್ತ್ರಪಡೆಯ ಟ್ರಿಬ್ಯುನಲ್ ನ್ಯಾಯಿಕ ಸದಸ್ಯ ಸತೀಶ್ ಚಂದ್ರನ್, ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್.ಮುದಗಲ್ ಯೋಧರಿಗೆ ಸಿಗುವ ಸೌಲಭ್ಯದ ಕುರಿತು ತಿಳಿಸಲಿದ್ದಾರೆ ಎಂದರು.

ಮೈಸೂರು ಸೈನಿಕ್ ಬೋರ್ಡ್ ನ ಉಪನಿರ್ದೇಶಕ ಬಾಲ ಸುಬ್ರಹ್ಮಣ್ಯ ಮಾತನಾಡಿ ಸೈನಿಕರು ತಮ್ಮ ಸಮಸ್ಯೆಗೆ ಕೇರಳಕ್ಕೆ ಹೋಗುತ್ತಿದ್ದಾರೆ. ಈ ತಿಂಗಳ 22ರಂದು ನಡೆಯಲಿರುವ ಈ ಕಾರ್ಯಾಗಾರದಲ್ಲಿ ಸೈನಿಕರ ಸಮಸ್ಯೆಗೆ ಸ್ಪಂದಿಸಿ ರಾಜ್ಯದಲ್ಲೇ ಟ್ರಿಬ್ಯುನಲ್ ನ್ಯಾಯಿಕ ಕಚೇರಿ ಸ್ಥಾಪಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಸೈನಿಕ ಸುಬ್ರಮಣಿ ಉಪಸ್ಥಿತರಿದ್ದರು.

Leave a Reply

comments

Related Articles

error: