ಮೈಸೂರು

೩೨ನೇ ವಾರ್ಡ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ.ಪ್ರಕಾಶ್ ನಾಳೆ ನಾಮಪತ್ರ ಸಲ್ಲಿಕೆ

ಮೈಸೂರು, ಜೂ.೨೦: ನಗರಪಾಲಿಕೆ ಜೆಡಿಎಸ್ ಸದಸ್ಯ ಮಹದೇಶ್ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ೩೨ನೇ ವಾರ್ಡ್‌ನ ಜೂ.೨ರಂದು ನಡೆಯುವ ಉಪಚುನಾವಣೆಗೆ ಮಾಜಿ ಮೇಯರ್ ಬಿ.ಕೆ.ಪ್ರಕಾಶ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೂ.೨೧ರ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದರು.
ಮಂಗಳವಾರ ನಗರದ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿಯನ್ನುzಶಿಸಿ ಮಾತನಾಡಿದ ಅವರು, ಒಂಟಿಕೊಪ್ಪಲಿನ ಮಾತೃಮಂಡಳಿ ವೃತ್ತದ ಬಳಿ ಇರುವ ಈಶ್ವರನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪಾಲಿಕೆಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಉzಶದಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವುದರಿಂದ ಪಕ್ಷವೂ ಶಕ್ತಿಯುತವಾಗಲಿದೆ. ಹಾಗಾಗಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಅಭ್ಯರ್ಥಿ ಆಯ್ಕೆಗೆ ಕಳೆದ ೫ದಿನಗಳಿಂದಲೂ ಕಸರತ್ತು ನಡೆಸುತ್ತಿದ್ದು, ೮ಮಂದಿಯನ್ನು ಅಂತಿಮಗೊಳಿಸಲಾಗಿತ್ತು. ಅವರಲ್ಲಿ ಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ನಗರ ಪಾಲಿಕೆ ಕಾಂಗ್ರೆಸ್ ಪಕ್ಷದ ನಾಯಕ ಸೌಕತ್ ಪಾಷಾ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಧಾಮಣಿ, ಪಾಲಿಕೆ ಸದಸ್ಯರಾದ ರಘುರಾಜೇ ಅರಸ್, ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: