ಕ್ರೀಡೆಪ್ರಮುಖ ಸುದ್ದಿ

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಕುಂಬ್ಳೆ ಗುಡ್‌ಬೈ

ಪ್ರಮುಖ ಸುದ್ದಿ, ಕ್ರೀಡೆ, ನವದೆಹಲಿ, ಜೂ.20: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಹೀನಾಯವಾಗಿ ಸೋಲುಂಡ ಬಳಿಕ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಬಳಿಕ ಟೀಂ ಇಂಡಿಯಾ ಆಟಗಾರರು ವೆಸ್ಟ್ ಇಂಡೀಸ್ ಗೆ ತೆರಳಿದರೆ ಕುಂಬ್ಳೆ ಮಾತ್ರ ತಂಡದೊಂದಿಗೆ ತೆರಳದೆ ಇಂಗ್ಲೆಂಡ್‌ನಲ್ಲಿಯೇ ಉಳಿದಿದ್ದಾರೆ. ಅಲ್ಲದೆ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಕೋಚ್ ಸ್ಥಾನದ ಅವಧಿ ಮುಗಿದಿದ್ದರೂ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಕುಂಬ್ಳೆ ಮಾತ್ರ ತಂಡದೊಂದಿಗೆ ತೆರಳಿಲ್ಲ .
ಅನಿಲ್ ಕುಂಬ್ಳೆ ಆಟಗಾರರೊಂದಿಗೆ ಉದ್ಧಟತನದಿಂದ ವರ್ತಿಸುತ್ತಾರೆ. ಅಗೌರವದಿಂದ ನಡೆದುಕೊಳ್ಳುತ್ತಾರೆ ಎಂದು ಟೀಂ ಇಂಡಿಯಾ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಬಿಸಿಸಿಐ ನೂತನ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಿತ್ತು. ಅಂತೆಯೇ ವೀರೇಂದ್ರ ಸೆಹ್ವಾಗ್ ಸೇರಿದಂತೆ ಹಲವರು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಮುಂದಿನ ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಕೋಚ್ ಆಗಿ ಅನಿಲ್ ಕುಂಬ್ಳೆ ಅವರೇ ಮುಂದುವರೆಯಲಿ ಎಂದು ಕ್ರಿಕೆಟ್ ಸಲಹಾ ಸಮಿತಿ ಬಿಸಿಸಿಐಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಕುಂಬ್ಳೆ ಇಂದು ತೆರಳಬೇಕಿತ್ತು ಆದರೆ ಕಾರಣಾಂತರದಿಂದ ಅವರು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ. (ವರದಿ ಬಿ.ಎಂ)

Leave a Reply

comments

Related Articles

error: