ಕರ್ನಾಟಕ

ಚಾಮರಾಜನಗರದಲ್ಲಿ ವಿಶ್ವ ಯೋಗ ದಿನಾಚರಣೆ

ರಾಜ್ಯ, (ಚಾಮರಾಜನಗರ), ಜೂ.21: ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಇಂದು ಕೇಂದ್ರ ಸರ್ಕಾರದ  ಆಯುಷ್ ಮಂತ್ರಾಲಯ, ರಾಜ್ಯ ಆಯುಷ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಪತಂಜಲಿ ಯೋಗ ಫೌಂಡೇಷನ್ ಸಹಯೋಗದಲ್ಲಿ 3 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ನಗರದ ಜಿಲ್ಲಾ  ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆದ 3 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 2000 ಕ್ಕೂ ಹೆಚ್ಚು ವಿವಿಧ ಶಾಲೆಯ ಮಕ್ಕಳು, ವಿವಿಧ ಇಲಾಖೆಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಯೋಗ ಮಾಡುವ  ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ರಾಮು, ಎಡಿಸಿ ಗಾಯಿತ್ರಿ, ಜಿಲ್ಲಾ ಪಂಚಾಯಿತಿ ಸಿಇಒ ಹರೀಶ್ ಕುಮಾರ್, ಎಸ್ಪಿ ಧರ್ಮೇಂದ್ರಕುಮಾರ್, ಎಎಸ್ಪಿ ಎಂ.ಎಸ್.ಗೀತಾ, ಡಿವೈಎಸ್ಪಿ ಗಂಗಾಧರಸ್ವಾಮಿ, ಡಿಡಿಪಿಐ ಮಂಜುಳು ಪಾಲ್ಗೊಂಡಿದ್ದರು. (ವರದಿ: ಆರ್.ವಿ.ಎಸ್, ಎಲ್.ಜಿ)

Leave a Reply

comments

Related Articles

error: