ದೇಶಪ್ರಮುಖ ಸುದ್ದಿ

ರಾಮನಾಥ್ ಕೋವಿಂದ್‍ಗೆ ಶಿವಸೇನೆ, ಎಸ್ಪಿ ಬೆಂಬಲ : ಗೆಲುವು ಸುಲಭ?

ನವದೆಹಲಿ, ಜೂ.21 : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿಯಿಂದ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಶಿವಸೇನೆ ಮತ್ತು ಸಮಾಜವಾದಿ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದೆ.

ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಮಂಗಳವಾರ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಸರ್ಕಾರ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದಾಗಲೂ ಶಿವಸೇನೆ ಬೆಂಬಲ ವ್ಯಕ್ತಪಡಿಸುವುದೋ ಇಲ್ಲವೋ ಎಂಬ ಅನುಮಾನ ಮೂಡಿತ್ತು.

ಇದೀಗ ಶಿವಸೇನೆ ಬೆಂಬಲ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಎನ್‍ಡಿಎ ಸಂಖ್ಯಾಬಲ ಹೆಚ್ಚಾಗಿದೆ. ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್ ಅವರನ್ನು ಆಯ್ಕೆ ಮಾಡಿರುವುದರ ಕುರಿತಂತೆ ನಿನ್ನೆ ಮುಂಬೈನಲ್ಲಿ ಮಾತನಾಡಿರುವ ಠಾಕ್ರೆಯವರು, ಕೋವಿಂದ್ ಅವರು ಉತ್ತಮ ವ್ಯಕ್ತಿತ್ವವುಳ್ಳ ವ್ಯಕ್ತಿಯಾಗಿದ್ದು, ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಕೋವಿಂದ್ ಅವರಿಗೆ ನಾವು ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಶಿವಸೇನೆ ಮಾತ್ರವಲ್ಲದೆ ಸಮಾಜವಾದಿ ಪಕ್ಷ, ಬಿಜೆಡಿ, ಟಿಆರ್‍ಎಸ್ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಕೋವಿಂದ್ ಅವರ ಆಯ್ಕೆ ಬಹುತೇಕ ಖಚಿವಾಗಿದೆ.  ತಮಿಳುನಾಡಿನ ಆಡಳಿತಾ ರೂಢ ಎಐಎಡಿಎಂಕೆ ಮುಖ್ಯಮಂತ್ರಿ ಪಳನಿಸ್ವಾಮಿ ಕೂಡ ಕೂಡ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಪಕ್ಷದ ಅಂತಿಮ ನಿರ್ಧಾರವನ್ನು ಶಶಿಕಲಾ ಮಾಡಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಬಿಜೆಪಿಗೆ ವಿವಿಧ ಪಕ್ಷಗಳ ಬೆಂಬಲ ನೀಡಿರುವುದರಿಂದ ವಿರೋಧ ಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಒಗ್ಗೂಡುವುದು ಕಷ್ಟವೆನ್ನುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

-ಎನ್.ಬಿ.

Leave a Reply

comments

Related Articles

error: