ಮೈಸೂರು

ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಡಾ.ಎನ್.ರಾಜಂ ಅವರಿಗೆ ಗೌರವ ಡಾಕ್ಟರೇಟ್ ಸಮರ್ಪಣೆ

ಮೈಸೂರು,ಜೂ.21:-  ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ವತಿಯಿಂದ ಜಗನ್ಮೋಹನ ಅರಮನೆಯಲ್ಲಿ ವಿಶ್ವಸಂಗೀತ ದಿನಾಚರಣೆ ಮತ್ತು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿದುಷಿ ಡಾ.ಎನ್.ರಾಜಂ ಅವರಿಗೆ ಗೌರವ ಡಾಕ್ಟರೇಟ್ ಸಮರ್ಪಣೆ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ತುಮಕೂರು  ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವಿವೇಕಾನಂದ ಸರಸ್ವತೀಜಿ ದೀಪ ಬೆಳಗುವ ಮೂಲಕ  ಉದ್ಘಾಟಿಸಿ ಶುಭಹಾರೈಸಿದರು. ಮತ್ತು ವಿದ್ವಾನ್ ವಿ.ನಾಗಭೂಷಣಾಚಾರ್, ವಿದುಷಿ ಎ.ಎಸ್.ಪದ್ಮ, ಡಾ.ಪಿ.ಕೆ.ರಾಜಶೇಖರ್ ಅವರನ್ನು ಸನ್ಮಾನಿಸಿದರು. ಸರ್ಟಿಫಿಕೇಟ್ ಕೋರ್ಸ್ ನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು.  ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸರ್ವಮಂಗಳಾಶಂಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಲಸಚಿವ ಡಾ.ನಿರಂಜನ್ ಸ್ವಾಗತಿಸಿದರು. (ಹೆಚ್.ಎನ್,ಎಸ್.ಎಚ್)

Leave a Reply

comments

Related Articles

error: