ಪ್ರಮುಖ ಸುದ್ದಿ

ಬಂಟ್ವಾಳದಲ್ಲಿ ಎಸ್‌ಡಿಪಿಐ ಸಂಘಟನೆಯ ಮುಖಂಡನ ಬರ್ಬರ ಹತ್ಯೆ

ಪ್ರಮುಖ ಸುದ್ದಿ, ಬಂಟ್ವಾಳ, ಜೂ.೨೧: ಎಸ್‌ಡಿಪಿಐ ಸಂಘಟನೆಯ ಮುಖಂಡ ಕಲಾಯಿ ಅಶ್ರಫ್ ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಜನಪದವಿನಲ್ಲಿ ಬುಧವಾರ ನಡೆದಿದೆ.
ಹತ್ಯೆಗೀಡಾದ ಅಶ್ರಫ್ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು ರೌಡಿ ಶೀಟರ್ ಆಗಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅಶ್ರಫ್ ಮೇಲೆ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಬಂಟ್ವಾಳ ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಲ್ಲಡ್ಕ ಗಲಭೆಯ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹತ್ಯೆಯ ಬಳಿಕ ಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. (ವರದಿ ಬಿ.ಎಂ)

Leave a Reply

comments

Related Articles

error: