ಮೈಸೂರು

ಹಣ್ಣು ಮತ್ತು ತರಕಾರಿ ಬೆಳೆ ರೈತರ ಕಾರ್ಯಾಗಾರಕ್ಕೆ ಚಾಲನೆ

ಮೈಸೂರು, ಜೂ.21: ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ಹಾಗೂ ಹಣ್ಣು ಮತ್ತು ತರಕಾರಿ ಬೆಳೆಗಾರರ ಸಂಘದ ವತಿಯಿಂದ ಬುಧವಾರ ನಗರದ ಎ.ಪಿ.ಎಂ.ಸಿ ಆವರಣದಲ್ಲಿ ಹಣ್ಣು ಮತ್ತು ತರಕಾರಿ ಬೆಳೆ ರೈತರ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ನಬಾರ್ಡ್ ನ ಜಿಲ್ಲಾ ಸಹಾಯಕ ವ್ಯವಸ್ಥಾಪಕ ಅರವಮುದನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉದ್ಘಾಟನಾ ಭಾಷಣ ಮಾಡಿದರು. ಕಾರ್ಯಕ್ರಮದ ಅಧ‍್ಯಕ್ಷತೆಯನ್ನು ವಹಿಸಿದ್ದ ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ನ ಛೇರ್ಮನ್ ಕುರುಬೂರು ಶಾಂತಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಿ.ಮಂಜುನಾಥ್, ಎ.ಪಿ.ಎಂ.ಸಿ.ಕಾರ್ಯದರ್ಶಿ ಮಹೇಶ್, ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ನ ನಿರ್ದೇಶಕ ಟಿ.ವಿ.ಗೋಪಿನಾಥ್, ಬೆಂಗಳೂರಿನ ಐ.ಐ.ಹೆಚ್.ಆರ್. ತೋಟಗಾರಿಕಾ ಬೆಳೆಗಳ ವಿಭಾಗದ ಮುಖ್ಯ ಸಂಶೋಧಕ ಡಾ.ಟಿ.ಎಂ.ಗಜಾನನ ಮತ್ತಿತರರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರೈತರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಚಂದ್ರೇಗೌಡ ಎಸ್.ಟಿ. ಕಾರ್ಯಕ್ರಮವನ್ನು ನಿರೂಪಿಸಿದರು.  70 ಕ್ಕೂ ಹೆಚ್ಚು ಮಂದಿ ರೈತರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. (ವರದಿ: ಹೆಚ್.ಎನ್, ಎಲ್.ಜಿ)

Leave a Reply

comments

Related Articles

error: