ಕರ್ನಾಟಕಪ್ರಮುಖ ಸುದ್ದಿ

ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ಘೋಷಣೆ

ಪ್ರಮುಖ ಸುದ್ದಿ, ಬೆಂಗಳೂರು, ಜೂ.21: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಸಾಲ ಮನ್ನಾ ಮಾಡುವುದಾಗಿ ಇಂದು ವಿಧಾನಮಂಡಲದ ಅಧಿವೇಶನದಲ್ಲಿ  ಘೋಷಿಸಿದ್ದಾರೆ.

ಸಹಕಾರ ಬ್ಯಾಂಕ್ ಗಳಲ್ಲಿನ 50 ಸಾವಿರ ರೂಪಾಯಿವರೆಗಿನ ಸಾಲಮನ್ನಾ ಮಾಡುವುದಾಗಿ  ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.  ಜೂನ್ 20 ರವರೆಗಿನ ರೈತರ ಸಾಲ ಮನ್ನಾ ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಈ ಘೋಷಣೆಯಿಂದ ರಾಜ್ಯದ  22,27,506 ರೈತರಿಗೆ ಅನುಕೂಲವಾಗಲಿದೆ.  ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರೂ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರ ಈ ನಿರ್ಧಾರ ರೈತರ ಮೊಗದಲ್ಲಿ ಸಂತಸ ತಂದಿದೆ. (ವರದಿ: ಎಸ್.ಎನ್, ಎಲ್.ಜಿ)

 

 

Leave a Reply

comments

Related Articles

error: