ಮೈಸೂರು

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೈಸೂರು, ಜೂ.೨೧: ಪ್ರತಿಯೊಬ್ಬ ಮನುಷ್ಯನು ಆರೋಗ್ಯವಾಗಿರಲು ಕುಡಿಯುವ ನೀರು ಮುಖ್ಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ನೀಡುವ ಸಲುವಾಗಿ ಸಾವಿರಾರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.
ವರುಣಾ ಕ್ಷೇತ್ರದ ಹಲಗಯ್ಯನಹುಂಡಿಯಲ್ಲಿ ೨೮ ಲಕ್ಷ ರೂ. ವೆಚ್ಚದ ಕಾಂಕ್ರಿಟ್ ಕಾಮಗಾರಿಗೆ ಗುದ್ದಲಿ ಪೂಜೆ, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಹಾರೋಹಳ್ಳಿ, ಪಟ್ಟೆಹುಂಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ನಂತರದಲ್ಲಿ ಪ್ರತಿಯೊಂದು ಗ್ರಾಮಕ್ಕೂ ಮೂಲ ಸೌಲಭ್ಯವನ್ನು ಒದಗಿಸುವುದರ ಮೂಲಕ ವರುಣಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಿದ್ದಾರೆ. ಪ್ರತಿಯೊಂದು ಗ್ರಾಮದಲ್ಲಿಯೂ ರಸ್ತೆಗಳು ಚರಂಡಿಗಳು, ಸಮುದಾಯ ಭವನಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ಅಂಗನವಾಡಿ ಕಟ್ಟಡಗಳು, ನದಿಮೂಲದಿಂದ ನೀರು, ಕೆರೆ ತುಂಬಿಸುವ ಯೋಜನೆ, ಆಸ್ಪತ್ರೆಗಳು ಹೀಗೆ ಕಳೆದ ನಾಲ್ಕು ವರ್ಷದಲ್ಲಿ ಸಾಗರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ಉಳಿದಿರುವ ಕೆಲಸಗಳನ್ನು ಪಟ್ಟಿಮಾಡಿಕೊಂಡು ಈ ವರ್ಷದ ಒಳಗೆ ಮಾಡಿಕೊಡುವುದಾಗಿ ತಿಳಿಸಿದರು.
ವಾಜಮಂಗಲ ಗ್ರಾ.ಪಂ. ಅಧ್ಯಕ್ಷೆ ಸವಿತಾ ಸುರೇಶ್, ಉಪಾಧ್ಯಕ್ಷೆ ಸುಂದರಮ್ಮ, ತಾ.ಪಂ ಮಾಜಿ ಸದಸ್ಯ ಎಂ.ಟಿ. ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುzಗೌಡ, ಗ್ರಾ.ಪಂ ಸದಸ್ಯ ಶಂಕರ್, ಭುಗತಹಳ್ಳಿ ಮಣಿ, ರಮೇಶ್, ಮಹಾದೇವ, ಗೋಪಿ, ಗೋವಿಂದ, ಎಪಿಎಂಸಿ ಸದಸ್ಯ ಆನಂದ, ಸಾಕಣ್ಣ, ನಾಗರಾಜ್, ತಿಮ್ಮಣ್ಣ, ಕಲ್ಪನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: