ಕರ್ನಾಟಕಪ್ರಮುಖ ಸುದ್ದಿ

2011ರ ಕೆಪಿಎಸ್ಸಿ ನೇಮಕಾತಿ ರದ್ದು: ಆದೇಶ ಎತ್ತಿಹಿಡಿದ ಹೈ ಕೋರ್ಟ್

ಪ್ರಮುಖ ಸುದ್ದಿ, ಬೆಂಗಳೂರು,ಜೂ.21-2011ರ ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶವನ್ನು ಹೈ ಕೋರ್ಟ್ ಕೂಡ ಎತ್ತಿ ಹಿಡಿಯುವ ಮೂಲಕ ಸರ್ಕಾರದ ಆದೇಶವನ್ನು ಸಮರ್ಥಿಸಿದೆ. ಇದು ಕೆಪಿಎಸ್ಸಿ ಅಭ್ಯರ್ಥಿಗಳಿಗೆ ಕಹಿ ಸುದ್ದಿಯಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ 2011 ರಲ್ಲಿ ನಡೆಸಿದ್ದ ಗೆಜೆಟೆಡ್ ಪ್ರೊಬೆಷನರ್ಸ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 362 ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡಿದ್ದ ಆಯ್ಕೆ ಪಟ್ಟಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು.

ಸರ್ಕಾರದ ಈ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ)2016ರಲ್ಲಿ ರದ್ದುಗೊಳಿಸಿತ್ತು. ಈ ಕುರಿತು ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಮುಂದಿನ ಆದೇಶದವರೆಗೂ ನೇಮಕಾತಿ ಆದೇಶ ನೀಡಬಾರದೆಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. (ವರದಿ-ಎಂ.ಎನ್)

Leave a Reply

comments

Related Articles

error: