ಕರ್ನಾಟಕಪ್ರಮುಖ ಸುದ್ದಿ

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಪ್ರದರ್ಶನ : ಸಂಸದ ನಳೀನ್ ಕುಮಾರ್ ಕಟೀಲ್ ಭಾಗಿ

ರಾಜ್ಯ(ಮಂಗಳೂರು)ಜೂ.21:-  ವಿಶ್ವ ಯೋಗ ದಿನಾಚರಣೆ-2017 ಇದರ ಅಂಗವಾಗಿ ನಗರದ ಪುರಭವನ ಹಾಗೂ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಮುಂಜಾನೆ ಯೋಗಾಭ್ಯಾಸ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಕವಿತಾ ಸನಿಲ್, ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜಿಲ್ಲಾಧಿಕಾರಿ ಜಗದೀಶ್ ಅವರು ನೂರಾರು ಯೋಗಪಟುಗಳ ಸಮ್ಮುಖದಲ್ಲಿ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಡಿ.ವಿರೇಂದ್ರ ಹೆಗ್ಗಡೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಹೇಮಾವತಿ ಹೆಗ್ಗಡೆ, ಕರ್ನಾಟಕ ಲೋಕಸೇವಾ ಆಯೋಗ ಅಧ್ಯಕ್ಷ ಶ್ಯಾಮ್ ಭಟ್, ಡಿ.ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಕೆನರಾ ಬ್ಯಾಂಕಿನ ಕೇಂದ್ರ ಕಚೇರಿಯ ಮಹಾ ಪ್ರಬಂಧಕ ರವೀಂದ್ರ ಭಂಡಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಯಶೋವರ್ಮ ಉಪಸ್ಥಿತರಿದ್ದರು. ಅರುಣ್ ಪೂಜಾರ್ ರಾಷ್ರೀಯ ಸೇವಾಯೋಜನೆ ಇದರ ಪ್ರಾಂತಿಯ ನಿರ್ದೇಶಕರು, ಡಾ.ಬಿ.ವಸಂತ್ ಶೆಟ್ಟಿ  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: