ಕರ್ನಾಟಕಪ್ರಮುಖ ಸುದ್ದಿ

ಜೂ.23ಕ್ಕೆ ಕಾಂಗ್ರೆಸ್ ಗೆ ಗುಡ್ ಬಾಯ್, ಹುಣಸೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಲಿರುವ ವಿಶ್ವನಾಥ್

ಪ್ರಮುಖ ಸುದ್ದಿ, ಬೆಂಗಳೂರು,ಜೂ.21- ದೇವರಾಜ ಅರಸು ಗರಡಿಯಲ್ಲಿ ರಾಜಕೀಯ ನೆಲೆ ಕಂಡುಕೊಂಡಿದ್ದ ಹಳ್ಳಿ ಹಕ್ಕಿ ಅಡಗೂರು ಎಚ್.ವಿಶ್ವನಾಥ್ ಜೂ.23ಕ್ಕೆ ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಅಂದು ಪತ್ರಿಕಾಗೋಷ್ಠಿ ನಡೆಸಿದ ಬಳಿಕ ಹಳೆ ಮೈಸೂರು ಪ್ರಾಂತ್ಯ ಸೇರಿ ಸಾವಿರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಚೇರಿಗೆ ಮೆರವಣಿಗೆಯಲ್ಲಿ ತಲುಪಿ ಎಐಸಿಸಿ ಸದಸ್ಯತ್ವಕ್ಕೆ ವಿಶ್ವನಾಥ್ ರಾಜೀನಾಮೆ ನೀಡಲಿದ್ದಾರೆ.

38 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿದ್ದ ವಿಶ್ವನಾಥ್ 1978 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನಲ್ಲಿ ಶಾಸಕರಾಗಿ, ಸಚಿವರಾಗಿ, ಎರಡು ಭಾರಿ ಉಸ್ತುವಾರಿ ಸಚಿವರಾಗಿ, ಮೈಸೂರು-ಕೊಡಗು ಕ್ಷೇತ್ರದ ಸಂಸದರಾಗಿದ್ದರು.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದಿಂದ ನಿರ್ಲಕ್ಷ್ಯಕ್ಕೆ ಒಳಗಾದ ವಿಶ್ವನಾಥ್ ಇದರಿಂದ ಬೇಸರಗೊಂಡು ಕಾಂಗ್ರೆಸ್ ಗೆ ವಿದಾಯ ಹೇಳಲಿದ್ದಾರೆ. ತಮ್ಮ ರಾಜಕೀಯ ಗುರುಗಳಾದ ದೇವರಾಜ ಅರಸು ಸ್ವಕ್ಷೇತ್ರ ಹುಣಸೂರಿನಿಂದ ವಿಶ್ವನಾಥ್ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ. ಜೆಡಿಎಸ್ ನಿಂದ ಅಮನತ್ತಾಗಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದ್ದರು. (ವರದಿ-ಆರ್.ವಿ, ಎಂ.ಎನ್)

 

 

Leave a Reply

comments

Related Articles

error: