ಕರ್ನಾಟಕಪ್ರಮುಖ ಸುದ್ದಿ

ಸಿಡಿಲು ಬಡಿದು ಮನೆಗೆ ಹಾನಿ

ರಾಜ್ಯ(ಮಂಗಳೂರು)ಜೂ.21:-  ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿಯಾದ ಘಟನೆ ಪುತ್ತೂರಿನ ಆರ್ಯಾಪು ಗ್ರಾಮದ ಕುಂಜೂರುಪಂಜ ಎಂಬಲ್ಲಿ ಸಂಭವಿಸಿದೆ.

ಪುತ್ತೂರು ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ ಅವರ ತಂದೆ ನಾರಾಯಣ ಪೂಜಾರಿ ಎಂಬವರ ಮನೆ  ಸಿಡಿಲು ಬಡಿದು ಹಾನಿಗೊಳಗಾಗಿದೆ. ಘಟನೆಯಲ್ಲಿ ನಾರಾಯಣ ಪೂಜಾರಿ ಅವರ ಮೊಮ್ಮಗ ವಿಜೇತ್ ಕುಮಾರ್ (17) ಎಂಬವರು ಗಾಯಗೊಂಡಿದ್ದಾರೆ. ಮನೆಯ ವಯರಿಂಗ್ ಹಾಗೂ ಇಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿಯಾಗಿದೆ. ಸಿಡಿಲಿನ ಅಬ್ಬರಕ್ಕೆ ಮನೆಯ ವಯರಿಂಗ್ ಹೋದ ಕಡೆಗಳಲ್ಲಿ ಗೋಡೆಗಳು ಕುಸಿದು ಬಿದ್ದಿದೆ. ವಿಜೇತ್ ಕುಮಾರ್ ಕೂಡ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಆರ್ಯಾಪು ಗ್ರಾ.ಪಂ. ಉಪಾಧ್ಯಕ್ಷ ವಸಂತ ಶ್ರೀದುರ್ಗಾ, ಗ್ರಾಮದ ಉಗ್ರಾಣಿ ಉಮೇಶ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: