ಕರ್ನಾಟಕ

ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ರಾಜ್ಯ(ಬೆಂಗಳೂರು)ಜೂ.21:- ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ’ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ’ ಆಗ್ರಹಿಸಿ ರಾಜ್ಯ ವಿದ್ಯುತ್ ಕಾರ್ಮಿಕರಿಂದ ಫೆಡರೇಷನ್‌ನ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ ನೂರಾರು ಮಂದಿ ವಿದ್ಯುತ್ ಕಾರ್ಮಿಕರು ಇಂಧನ ಇಲಾಖೆಯ ಎಲ್ಲ ವಿಭಾಗಗಳ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿದರು. ಸುಪ್ರೀಂಕೋರ್ಟ್‌ನ ಆದೇಶದಂತೆ ಸಮಾನ ಕೆಲಸಕ್ಕೆ 21ಸಾವಿರ ರೂ.ಗಳ ಸಮಾನ ವೇತನ ನೀಡಬೇಕು.  ನೇರ ನೇಮಕಾತಿಯಲ್ಲಿ ಸೇವಾ ಹಿರಿತನದ ಆಧಾರದಲ್ಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿದರು. ವಿದ್ಯುತ್ ಅಪಘಾತಗಳಾದಾಗ ಸಾವನ್ನಪ್ಪುವ ಹಾಗೂ ಅಂಗವಿಕಲರಾಗಿರುವ ಕಾರ್ಮಿಕರ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ನಿರ್ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವವನ್ನು ಫೆಡರೇಷನ್‌ನ ಅಧ್ಯಕ್ಷ ಸತ್ಯಬಾಬು, ಪ್ರಧಾನ ಕಾರ್ಯದರ್ಶಿ ಶಿವಕುಮಾರ್  ವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: