ಮೈಸೂರು

32ನೇ ವಾರ್ಡ್ ನ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಮೈಸೂರು,ಜೂ.21-ಮೈಸೂರು ಮಹಾನಗರಪಾಲಿಕೆ 32ನೇ ವಾರ್ಡ್ನ ಸದಸ್ಯ ಮಹದೇಶ್ ಅವರ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ತೆರವಾಗಿರುವ ಆ ಸ್ಥಾನಕ್ಕೆ ಜು.2 ರಂದು ಉಪಚುನಾವಣೆ ನಡೆಯಲಿದ್ದು, ಇಂದು ಹಲವರು ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಮಹಾಪೌರ ಬಿ.ಕೆ.ಪ್ರಕಾಶ್ ಬುಧವಾರ ಚುನಾವಣಾಧಿಕಾರಿ ವಿ.ಪ್ರಿಯದರ್ಶಿನಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಧ್ರುವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಮಾಜಿ ನಗರಪಾಲಿಕೆ ಸದಸ್ಯ ಶಿವಣ್ಣ ಉಪಸ್ಥಿತರಿದ್ದರು. (ವರದಿ-ಎಚ್.ಎನ್,ಎಂ.ಎನ್)

Leave a Reply

comments

Related Articles

error: