ಕರ್ನಾಟಕ

ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ : ಸವಾರ ಸಾವು

ರಾಜ್ಯ(ಮಧುಗಿರಿ) ಜೂ.21:-  ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಪಾವಗಡ ಕೆಶಿಪ್ ರಸ್ತೆ (ಅವರ್ಗಲ್ಲು) ಗಡ್ಡೆತಿಮ್ಮನಹಳ್ಳಿ ಬಳಿ ನಡೆದಿದೆ.

ಮೃತನನ್ನು ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ವೆಂಕಟಾಪುರ ನಿವಾಸಿ ನಂಜೇಗೌಡ (51) ಎಂದು ಗುರುತಿಸಲಾಗಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಮಧುಗಿರಿ ಕಡೆಯಿಂದ ಎದುರಿಗೆ ಬಂದ ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: