ಮೈಸೂರು

ತಮಿಳುನಾಡಿಗೆ ನೀರು ಬಿಟ್ಟಿದ್ದಕ್ಕೆ ಖಂಡನೆ: ನಾಲ್ಕನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ವೀರ ಮಕ್ಕಳ ಬಳಗವು ನಗರದ ಗಾಂಧಿ ಚೌಕದಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೆ ದಿನಕ್ಕೆ ಕಾಲಿಟ್ಟಿದೆ.

ತಮಿಳುನಾಡಿಗೆ ನೀರು ಬಿಟ್ಟಿರುವ ಸಿಎಂ ಸಿದ್ದರಾಮಯ್ಯನವರ ನಿರ್ಧಾರವನ್ನು ಖಂಡಿಸಿದ ಬಳಗದ ಕಾರ್ಯಕರ್ತರು ನಾಲ್ಕನೇ ದಿನವೂ ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ನಡುವೆ ನಿರಂತರವಾಗಿ ಪ್ರತಿಭಟನೆ ನಡೆಸಲು ಅವಕಾಶ ಕೊಡದ ಪೊಲೀಸ್ ಇಲಾಖೆಯನ್ನು ಖಂಡಿಸಿ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುತ್ತಿರುವ ತೀರ್ಪು ರಾಜ್ಯಕ್ಕೆ ಮಾರಕವಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿದರು. ರಾಜ್ಯದ ಪರವಾದ ಮಂಡಿಸುತ್ತಿರುವ ನಾರಿಮನ್ ಬದಲಾವಣೆ ಮಾಡುವಂತೆ ಕಾರ್ಯಕರ್ತರು ಒತ್ತಾಯಿಸಿದರು.

ಸಿಎಂ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಚೇಲಾಗಳಂತೆ ಪೊಲೀಸ್ ಇಲಾಖೆ ವರ್ತಿಸುತ್ತಿರುವುದು ಖಂಡನೀಯ. ಕಾವೇರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ತಮಿಳುನಾಡಿಗೂ ನೀರು ಬೀಡುವ ತೀರ್ಮಾನ ಮಾಡುವ ಮೂಲಕ ರಾಜ್ಯದ್ರೋಹದ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಜಿಲ್ಲಾ  ಬಿಜೆಪಿ ಮಾಜಿ ಅಧ್ಯಕ್ಷ ಮಾರುತಿರಾವ್ ಪವಾರ್, ಬಳಗದ ಅಧ್ಯಕ್ಷ ಎಸ್.ಸಿ.ರಾಜೇಶ್, ಉಪಾಧ್ಯಕ್ಷ ಆರ್. ಶಿವಮೂರ್ತಿ, ಖಜಾಂಚಿ ಸಿದ್ಧಪ್ಪ, ಸಂಚಾಲಕ ಕೆ.ಎಂ.ಜಗದೀಶ್, ನಟರಾಜು ಇನ್ನಿತರರು ಹಾಜರಿದ್ದರು.

Leave a Reply

comments

Related Articles

error: