ಮೈಸೂರು

ಬಿಜೆಪಿ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭ

ನಗರದ ಕುವೆಂಪುನಗರದಲ್ಲಿರುವ ಜಯಮ್ಮ ಗೋವಿಂದೇಗೌಡ ಕಲ್ಯಾಣಮಂಟಪದಲ್ಲಿ ಕೃಷ್ಣರಾಜ ಕ್ಷೇತ್ರ ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಘಟಕದ ನೂತನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಮಂಡಲ ಪದಾಧಿಕಾರಿಗಳು, ಶಕ್ತಿ ಕೇಂದ್ರ, ವಾರ್ಡ್ ಮಟ್ಟದ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭವನ್ನು ಶನಿವಾರ ಆಯೋಜಿಸಲಾಗಿತ್ತು.

ಇದೇ ವೇಳೆ ಮಾಜಿ ಸಚಿವ ಎಸ್.ಎ. ರಾಮದಾಸ್ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಬಂದ ಮೇಲೆ ರಾಜ್ಯವನ್ನು ಪಾನ ಮುಕ್ತವನ್ನಾಗಿ ಮಾಡಬೇಕು. ಕೃಷ್ಣರಾಜ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡಲು ಕಾರ್ಯಪ್ರವೃತ್ತರಾಗಬೇಕು. ರಾಜಕೀಯ ಮಾತ್ರವಲ್ಲದೆ, ಸಾಮಾಜಿಕ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಕೃಷ್ಣರಾಜ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಎಲ್ಲರೂ ಮುಂದಾಗಬೇಕು ಎಂದು ಹೇಳಿದರು.

ರಾಜ್ಯಅತಿ ಹೆಚ್ಚು ಲಿಕ್ಕರ್ ಶಾಪ್‌ಗಳನ್ನು ಹೊಂದಿದ್ದು, 2015-16 ರಲ್ಲಿ 99.97 ಕೋಟಿ ಲೀಟರ್ ಮದ್ಯ ಮಾರಾಟವಾಗಿದೆ. 1.28 ಕೋಟಿ ಮಂದಿ ಈ ದುಶ್ಚಟಕ್ಕೆ ದಾಸರಾಗಿದ್ದು, ಇವರೊಂದಿಗೆ 8 ಲಕ್ಷ ಯುವಕ-ಯುವತಿಯರು ಸೇರ್ಪಡೆಯಾಗುತ್ತಿದ್ದಾರೆ ಎಂದ ಅವರು,  ಇದು ಸಮಾಜ, ಕುಟುಂಬ ಹಾಗೂ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ ಮದ್ಯ ಮಾರಾಟದಿಂದ ಬರುತ್ತಿರುವ 15 ಸಾವಿರ ಕೋಟಿ ರೂ. ಆದಾಯವನ್ನು ಬೇರೆ ಮೂಲಗಳಿಂದ ಪಡೆದುಕೊಳ್ಳಲು ಮುಂದಾಗಿ ರಾಜ್ಯವನ್ನು ಪಾನ ಮುಕ್ತವನ್ನಾಗಿ ಮಾಡಬೇಕು ಎಂದರು.

ಸಂಸದ ಪ್ರತಾಪಸಿಂಹ ಮಾತನಾಡಿ, ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳಿಗಾಗಿ ರೂಪಿಸಿರುವ ಯೋಜನೆಗಳು ಎಲ್ಲರಿಗೂ ತಲುಪುವಂತೆ ಮಾಡುವ ಮೂಲಕ ಪಕ್ಷದ ಸಂಘಟನೆಗೆ ಮುಂದಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಮ್‌ದಾಸ್ ಅವರು ಕೃಷ್ಣರಾಜ ಕ್ಷೇತ್ರ ಬಿಜೆಪಿ ಮಹಿಳಾಮೋರ್ಚಾದ ಅಧ್ಯಕ್ಷೆ ನೂರ್‌ಫಾತಿಮಾ, ಪ್ರಧಾನ ಕಾರ್ಯದರ್ಶಿಗಳಾದ ಆರ್. ಅನ್ನಪೂರ್ಣ, ಎಂ.ವಿ. ರೇಖಾ ಅವರಿಗೆ ಜವಾಬ್ದಾರಿ ಪತ್ರ ಹಸ್ತಾಂತರಿಸಿದರು.

ಬಿಜೆಪಿ ನಗರಾಧ್ಯಕ್ಷ ಡಾ. ಬಿ.ಎಚ್. ಮಂಜುನಾಥ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುಳಾ, ಉಪಮೇಯರ್ ವನಿತಾ ಪ್ರಸನ್ನ, ಮಾಜಿ ಉಪಮೇಯರ್ ಮಹದೇವಮ್ಮ, ಜಿಲ್ಲಾ ಸಹಕಾರ ಸಂಘದ ಅಧ್ಯಕ್ಷ ಎಚ್.ವಿ. ರಾಜೀವ್, ನಗರಪಾಲಿಕೆ ಸದಸ್ಯರಾದ ಬಿ.ವಿ. ಮಂಜುನಾಥ್, ಮಾ.ವಿ. ರಾಮ್‌ಪ್ರಸಾದ್, ಸೀಮಾ ಪ್ರಸಾದ್, ಸ್ನೇಕ್ ಶ್ಯಾಂ, ನಗರಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿಯ ಜಗದೀಶ್, ಚಿಕ್ಕಮ್ಮ ಬಸವರಾಜ್, ವಿದ್ಯಾಅರಸ್, ರಾಜೇಶ್, ಶಾಂತ ಸೋಮಶೇಖರ್ ಇತರರು ಉಪಸ್ಥಿತರಿದ್ದರು.

Leave a Reply

comments

Related Articles

error: