ಮೈಸೂರು

ಅಂತಾರಾಷ್ಟ್ರೀಯ ಯೋಗ: ಹಿರಿಯ ಯೋಗ ಶಿಕ್ಷಕರಿಗೆ ಸನ್ಮಾನ

ಮೈಸೂರು,ಜೂ.21-3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರಿಕ ವೇದಿಕೆ ವತಿಯಿಂದ ಮೂವರು ಹಿರಿಯ ಯೋಗ ಶಿಕ್ಷಕರನ್ನು ಸನ್ಮಾನಿಸಲಾಯಿತು.

ನಗರದ ರಾಮಕೃಷ್ಣನಗರದಲ್ಲಿರುವ ಸಂಧ್ಯಾ ಸುರಕ್ಷಾ ಟ್ರಸ್ಟ್ ನ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಯೋಗ ಶಿಕ್ಷಕರಾದ ಡಾ.ಎಚ್.ವಿ.ಶಶಿರೇಖ, ವಿ.ಶಾಂತಾರಾಂ, ಜಲಯೋಗಿ ಶ್ರೀ ಎಂ.ರವಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ.ಎಸ್.ರಘುರಾಮಯ್ಯ ವಾಜಪೇಯಿ, ಯೋಗ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೀಗಾಗಿ ಎಲ್ಲರೂ ತಮ್ಮ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಬೇಕು ಎಂದರು.

ಅಷ್ಟಾಂಗ ಯೋಗ ಕುರಿತು ಡಾ.ಕೃಷ್ಣಮೂರ್ತಿ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ.ಕೆ.ಲೀಲಾಪ್ರಕಾಶ್ ಮಾತನಾಡಿದರು. ಕೇಂದ್ರದ ನಿರ್ದೇಶಕರಾದ ಡಾ.ಪಿ.ಎನ್.ಗಣೇಶ್ ಕುಮಾರ್, ಮೈಸೂರು ಯೋಗ ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ವಿ.ಸೋಮಶೇಖರ್, ಕಾರ್ಯದರ್ಶಿ ಎನ್.ಅನಂತ, ಹಿರಿಯ ಕವಯತ್ರಿ ಪುಷ್ಪಾ ಐಯ್ಯಂಗಾರ್, ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಬಿ.ಆರ್.ನಟರಾಜ್ ಜೋಯ್ಸ್ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: