ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮಡಿಕೇರಿ,ಜೂ.21-ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ಹೊಲಿಗೆ ತರಬೇತಿ ಕೇಂದ್ರಕ್ಕೆ 2017-18ನೇ ಸಾಲಿಗೆ ಪ್ರವೇಶ ಕೋರಿ ಅರ್ಹ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊಲಿಗೆ ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟು ಹಾಗೂ 35 ವರ್ಷದೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಮೀರಿರಬಾರದು. ಪ್ರವರ್ಗ 1 ರ, ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಮೀರಬಾರದು.

ಆಸಕ್ತ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಮಡಿಕೇರಿ ತಾಲ್ಲೂಕು, ತಾ.ಪಂ. ಕಚೇರಿ ಹಿಂಭಾಗ, ಸುದರ್ಶನ ವೃತ್ತ ಹತ್ತಿರ, ಮಡಿಕೇರಿ ಇವರಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಜುಲೈ 15 ರೊಳಗೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಮಡಿಕೇರಿ ತಾಲ್ಲೂಕು ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ 9448205919, 08272-298037 ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ತಿಳಿಸಿದ್ದಾರೆ. (ವರದಿ-ಕೆ.ಸಿ.ಐ,ಎಂ.ಎನ್)

Leave a Reply

comments

Related Articles

error: