ಕರ್ನಾಟಕಪ್ರಮುಖ ಸುದ್ದಿ

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ

ರಾಜ್ಯ(ಮಂಡ್ಯ)ಜೂ.22:- ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ಅವರನ್ನು ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಿದ್ದು, ಮಂಡ್ಯ ಎಸ್ಪಿಯಾಗಿ  ಬೆಳಗಾವಿಯಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ರಾಧಿಕಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸುಧೀರ್ ಕುಮಾರ್ ರೆಡ್ಡಿ 2016 ಜನವರಿ 5ರಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆ ಹಾಗೂ ಅನಧಿಕೃತ ಕ್ಲಬ್ ಗಳಿಗೆ ಕಡಿವಾಣ ಹಾಕುವ ಮೂಲಕ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರವಾಗಿದ್ದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: