ಮೈಸೂರು

ಮತಾಂತರಕ್ಕೆ ನಿರಾಕರಿಸಿದ ಮಗನ ಮೇಲೆ ತಂದೆಯಿಂದಲೇ ಹಲ್ಲೆ

ಮೈಸೂರು,(ಎಚ್.ಡಿ.ಕೋಟೆ),ಜೂ.22-ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ ಮಗನ ಮೇಲೆ ತಂದೆಯೇ ಹಲ್ಲೆ ನಡೆಸಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಟೈಗರ್ ಬ್ಲಾಕ್ ನ ನಿವಾಸಿ ರವಿ ಮಗನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ. ಆದರೆ ಮಗ ಪವಿತ್ ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕೆ ಆತನನ್ನು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾನೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ರವಿ ಕ್ರಿಶ್ಚಿಯನ್ ಆಗಿ ಮತಾಂತರಗೊಳ್ಳುವ ಮೊದಲು ಹಿಂದೂ ದೇವಸ್ಥಾನದ ಪೂಜಾರಿಯಾಗಿದ್ದ.

ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ರವಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಸ್.ಎನ್, ಎಂ.ಎನ್)

Leave a Reply

comments

Related Articles

error: