ಮೈಸೂರು

ಕರಾಮುವಿ : 2017-18ನೇ ಸಾಲಿನಿಂದ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವ ಸಾಧ್ಯತೆ

ಮೈಸೂರು,ಜೂ.22:- 2017-18ನೇ ಸಾಲಿನಿಂದ  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳು ಮತ್ತೆ ಆರಂಭವಾಗುವ ಸಾಧ್ಯತೆಗಳು ಗೋಚರಿಸುತ್ತಿವೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಎಸ್.ಕೆ.ಶರ್ಮ ಅವರೊಂದಿಗೆ ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ, ಮುಕ್ತ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅವರು ನಡೆಸಿದ ಸಭೆ ಫಲಪ್ರದವಾಗಿದೆ ಎಂದು ತಿಳಿದು ಬಂದಿದೆ. ಯುಜಿಸಿ ಪ್ರತಿನಿಧಿಗಳ ಸಮ್ಮುಖದಲ್ಲಿ ಸಭೆ ನಡೆಸಿದ ಶರ್ಮ ಮುಕ್ತ ವಿವಿ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಿದ್ದಾರೆ. 2017-18ನೇ ಸಾಲಿನಲ್ಲಿ ಹೊಸ ಕೋರ್ಸ್ ಗಳನ್ನು ಆರಂಭಿಸಬಹುದು. ಇದಕ್ಕಾಗಿ ಸಿದ್ಧತೆಗಳನ್ನು ನಡೆಸಿಕೊಳ್ಳಬಹುದು. ಈ ಕುರಿತು ಮುಂದಿನ ಒಂದು ವಾರದಲ್ಲಿ ಯುಜಿಸಿ ಪ್ರಕಟಣೆ ಹೊರಡಿಸಬಹುದು ಎಂದಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ. 2013-14ನೇ ಶೈಕ್ಷಣಿಕ ಸಾಲಿನ ನಂತರ ವಿವಿ ನೀಡಿರುವ ಕೋರ್ಸ್ ಗಳ ಮಾನ್ಯತೆ ರದ್ದು ಪಡಿಸಿದ ವಿಷಯಗಳೇ ಬೇರೆ, 17-18ರಿಂದ ಆರಂಭಿಸುವ ಕೋರ್ಸ್ ಗೆ ನೀಡಿರುವ ಅನುಮತಿಯೇ ಬೇರೆ ಈ ಎರಡೂ ಒಂದೇ ಅಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಈ ವಿಷಯದಿಂದ ಹೋದ ಜೀವ ಬಂದಂತಾಗಿದೆ ಎಂದರೂ ತಪ್ಪಾಗಲಾರದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: