ಸುದ್ದಿ ಸಂಕ್ಷಿಪ್ತ

ವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ

ಮೈಸೂರು,ಜೂ.22- 2017-18ನೇ ಸಾಲಿನಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ತಲಾ 1  ಅಭ್ಯರ್ಥಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಯನ್ನು ವಾಹನ ಚಾಲನಾ ತರಬೇತಿ ಶಾಲೆಗಳ ಮೂಲಕ ನೀಡಲು ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು 18 ವರ್ಷ ವಯೋಮಿತಿ ಪೂರೈಸಿರಬೇಕು. 8ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಲಘು ಮೋಟಾರು ವಾಹನಕ್ಕೆ ಲೈಸೆನ್ಸ್ ಪಡೆದು 1 ವರ್ಷದ ಪೂರೈಸಿರಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. (ವರದಿ-ಎಂ.ಎನ್)

Leave a Reply

comments

Related Articles

error: