ಮೈಸೂರು

ಖಾಸಗಿ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ: ಬೇಸರ ವ್ಯಕ್ತಪಡಿಸಿದ ಯದುವೀರ್

ಮೈಸೂರು,ಜೂ.22-ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿರುವುದಕ್ಕೆ ಯದುವೀರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಹಾಗೂ ನನ್ನ ಕುಟುಂಬದ ಮಧ್ಯೆ ಒಂದು ಗೆರೆ ಇದೆ. ನನ್ನ ವೈಯಕ್ತಿಕ ವಿಚಾರಗಳನ್ನ ಸಾರ್ವಜನಿಕವಾಗಿ ಮಾತನಾಡುವುದು ಸರಿಯಲ್ಲ. ನಾನು ಈ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಯದುವೀರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇನ್ನೂ ರಾಜಕೀಯ ಪ್ರವೇಶ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸದ್ಯಕ್ಕೆ ರಾಜಕೀಯ ಸೇರುವುದಿಲ್ಲ. ರಾಜಕೀಯ ಸೇರುವ ಆಸಕ್ತಿಯೂ ನನಗಿಲ್ಲ. ನನಗೆ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಹೆಚ್ಚು ಖುಷಿ ನೀಡಿದೆ. ಮುಂಬರುವ ದಿನಗಳಲ್ಲೂ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾನೀಗ ಸ್ವಯಂ ಸೇವಾ ಸಂಸ್ಥೆಯ ಶೈಕ್ಷಣಿಕ ರಾಯಭಾರಿಯಾಗಿದ್ದೇನೆ. ಆ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಈ ಕಾರ್ಯ ನನಗೆ ಹೆಚ್ಚು ಸಂತಸ ತಂದಿದೆ ಎಂದರು.

(ವರದಿ-ಆರ್.ವಿ, ಕೆ.ಎಸ್,ಎಂ.ಎನ್)

 

 

 

Leave a Reply

comments

Related Articles

error: