ಕರ್ನಾಟಕ

ವೀಕೆಂಡ್ ವಿತ್ ರಮೇಶ್ ನಲ್ಲಿ ಸಿಎಂ ಸಿದ್ದರಾಮಯ್ಯ

ರಾಜ್ಯ, ಬೆಂಗಳೂರು, ಜೂ.22: ಜೀ ವಾಹಿನಿಯಲ್ಲಿ ಪ್ರಸಾರವಾಗುವ  ವೀಕೆಂಡ್ ವಿತ್ ರಮೇಶ್ ಸೀಸನ್ 3 ರಲ್ಲಿ ರಾಜಕೀಯ ವ್ಯಕ್ತಿಗಳು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟಿನಲ್ಲಿ ಕುಳಿತಿದ್ದರು. ಇದರಿಂದ ಜೀ ವಾಹಿಬಿಯ ಟಿ.ಆರ್.ಪಿ ಹೆಚ್ಚಾಗಿತ್ತು.  ಇದೀಗ  ಸಿಎಂ ಸಿದ್ದರಾಮಯ್ಯ  ವೀಕೆಂಡ್ ವಿತ್ ರಮೇಶ್ ನ ಕೊನೆಯ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ವಾರ ವೀಕೆಂಡ್ ವಿತ್ ರಮೇಶ್ ನಲ್ಲಿ ಸಿದ್ದರಾಮಯ್ಯ ಕೊನೆಯ ಅತಿಥಿಗಳಾಗಿ ಆಗಮಿಸಲಿದ್ದು,  ಇದರೊಂದಿಗೆ ಈ ಸೀಸನ್ ಕಾರ್ಯಕ್ರಮ ಮುಗಿಯಲಿದೆ.

ಜೊತೆಯಲ್ಲಿ ಶನಿವಾರ ಹಾಗೂ ಭಾನುವಾರ ಸಿಎಂ ಅವರ ಬಾಲ್ಯ ಹಾಗೂ ರಾಜಕೀಯ ಜೀವನವನ್ನು ನೋಡಲು ಎಲ್ಲರೂ ಕಾತುರತೆಯಿಂದ ಕಾಯುತ್ತಿದ್ದಾರೆ. (ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: