ಮೈಸೂರು

ರೈತರ ಸಾಲ ಮನ್ನಾ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಮೈಸೂರು, ಜೂ.22: ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲದಲ್ಲಿ 50 ಸಾವಿರ ರೂ.ಗಳನ್ನು ಮನ್ನಾ ಮಾಡಿರುವ ಮುಖ‍್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಸ್ವಾಗತಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ  ಕಿಸಾನ್ ಖೇತ್ ಮಸ್ದೂರ್ ಕಾಂಗ್ರೆಸ್ ಘಟಕ ಸಂಭ್ರಮಾಚರಣೆಯನ್ನು ಆಚರಿಸಿತು.

ಗುರುವಾರ  ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾರವರ ನೇತೃತ್ವದಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯದ ಎದುರು ಇರುವ ಗಾಂಧಿ ಪ್ರತಿಮೆಯ ಬಳಿ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸಿಹಿ ಹಂಚಿ ಸಂಭ್ರಮಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭ‍ದಲ್ಲಿ ಕಿಸಾನ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರಗೌಡ, ರಾಜ್ಯ ಕಾರ್ಯದರ್ಶಿ ಎಸ್.ಸುಹಾಸ್, ನಗರ ಘಟಕದ ಅಧ್ಯಕ್ಷ ಎನ್.ಎ.ನಾಗೇಂದ್ರ ಹಾಗೂ ನಗರ ಘಟಕದ ಪದಾಧಿಕಾರಿಗಳಾದ ಕಮಲೇಶ್ ಕವಾಡ್, ಆನಂದ್, ಕಿರಣ್, ಪರಶಿವಮೂರ್ತಿ ಹಾಗೂ ವಡಿವೇಲನ್ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಗೂ ಮುಂಚೂಣಿ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. (ವರದಿ: ಹೆಚ್.ಎನ್, ಎಲ್.ಜಿ)

Leave a Reply

comments

Related Articles

error: