ಮೈಸೂರು

ಪೋದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರು,ಜೂ.22:- “ಮೈಸೂರಿನ ಹೆಬ್ಬಾಳದ ಕೈಗಾರಿಕಾ ಪ್ರದೇಶದಲ್ಲಿರುವ ಪೋದಾರ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸುಮಾರು 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಸಾಮೂಹಿಕ ಯೋಗ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ, “ಯೋಗದ ಮಹತ್ವವೇನು, ಇಂದಿನ ಆಧುನಿಕ ಜೀವನದಲ್ಲಿ ಯೋಗದ ಅನಿವಾರ್ಯತೆ ,ಪ್ರತಿದಿನ ಯೋಗ ಮಾಡುವುದರಿಂದ ಪಡೆಯುವ ಅನುಕೂಲಗಳು ಹಾಗೂ ಮನುಷ್ಯ ಆರೋಗ್ಯವಂತನಾಗಿರಲು ಯೋಗ ಎಷ್ಟು ಮುಖ್ಯ ಎಂಬ ವಿಷಯವನ್ನು ಈ ಸಂದರ್ಭದಲ್ಲಿ ತಿಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಕೃಷ್ಣ ಬಂಗೇರ ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: