ಮೈಸೂರು

ಜನರಲ್ಲಿ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು : ಮೊಹಮ್ಮದ್ ಮುಜೀರುಲ್ಲಾ

ಮೈಸೂರು,ಜೂ.22:- ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾನವಹಕ್ಕುಗಳು ಮತ್ತು ಇತರೆ ಅಗತ್ಯ ಕಾನೂನುಗಳ ಅರಿವು ನೆರವು, ಮೈಸೂರು ನಗರ ಜಿಲ್ಲಾ  ಘಟಕ ಉದ್ಘಾಟನೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ದತ್ತು ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಕೆ.ಎ.ಆರ್.ಪಿ.ಬಾಡಿಗಾರ್ಡ್ ಲೈನ್ಸ್ ಜಾಕಿ ಕ್ವಾಟ್ರಸ್, ಕುರುಬಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ಮುಜೀರುಲ್ಲಾ ಸಿ.ಜಿ. ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಂವಿಧಾನದಲ್ಲಿ  ಮನುಷ್ಯನಿಗೆ ತಮ್ಮದೇ ಆದ ಹಕ್ಕಿದೆ. ನಾವು ನಮ್ಮ ಹಕ್ಕುಗಳ ಬಗ್ಗೆ ಓದಿದ್ದೇವೆ, ತಿಳಿದುಕೊಂಡಿದ್ದೇವೆ, ಅದನ್ನು ಯಾವ ರೀತಿ ಚಲಾಯಿಸಬೇಕು ಎಂಬುದನ್ನು ತಿಳಿದಿರುವುದಿಲ್ಲ, ನಮ್ಮ ಜೀವನ ಇಷ್ಟೇ ಅಂದುಕೊಂಡು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳದೇ ಸಮಯ ಕಳೆಯುತ್ತಾರೆ. ಹಕ್ಕುಗಳ ಉಲ್ಲಂಘನೆಯಾದರೆ ನ್ಯಾಯಾಲಯದಲ್ಲಿ ಶಿಕ್ಷೆ ಖಚಿತ. ಜನರಲ್ಲಿ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ನಮ್ಮ ಹಕ್ಕುಗಳಿಗೆ ಧಕ್ಕೆ ಆದರೆ ಹೋರಾಟ ನಡೆಸಿ ಹಕ್ಕನ್ನು ಪಡೆದುಕೊಳ್ಳಬೇಕು ಎಂದರು. ಇದೇ ಸಂದರ್ಭ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ನಂತರ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ಉದ್ಯಮಿ ಲಯನ್ ಎಸ್.ವೆಂಕಟೇಶ್, ಮಹಿಳಾ ರಾಜ್ಯಾಧ್ಯಕ್ಷೆ ಬಿ.ಎಸ್.ಗೀತಾ ಗಣೇಶ್, ಲತಾ, ಹನುಮಯ್ಯ,ನಾಗರಾಜು, ಸುಮಿತ್ರ,  ದ್ಯಾವಪ್ಪ ನಾಯಕ,  ರೋಂಬೋ ಕಿರಣ್, ಕಸ್ತೂರಿ ಚಂದ್ರು, ಷಡಕ್ಷರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: