ಕರ್ನಾಟಕ

ರೈತರ ಸಾಲ ಮನ್ನಾ: ಕೆಜಿಎಫ್ ನಿಂದ ಸಿಎಂ ಗೆ ಅಭಿನಂದನೆ

ರಾಜ್ಯ, (ಚಿಕ್ಕಮಗಳೂರು) ಜೂ.22: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಹಕಾರ ಬ್ಯಾಂಕುಗಳಲ್ಲಿ ರೈತರು ಮಾಡಿರುವ 50 ಸಾವಿರ ರೂ.ಗಳವರೆಗಿನ ಸಾಲವನ್ನು ಮನ್ನಾ ಮಾಡಿರುವ ಹಿನ್ನಲೆ ಕರ್ನಾಟಕ ಬೆಳೆಗಾರರ ಒಕ್ಕೂಟವು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕೆಜಿಎಫ್ ಅಧ‍್ಯಕ್ಷ ಜೈರಾಂ ಮತ್ತು ಪ್ರಧಾನ ಕಾರ್ಯದರ್ಶಿ ಯು.ಎಂ.ತೀರ್ಥ ಮಲ್ಲೇಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕರ್ನಾಟಕ ಬೆಳೆಗಾರರ ಒಕ್ಕೂಟವು ಆಗ್ರಹಿಸಿದೆ.

ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆ ವ್ಯತ್ಯಯದಿಂದ ರೈತರು ಆರ್ಥಿಕ ಸಂಕಷ್ಟದಲ್ಲಿದ್ದು, ಬ್ಯಾಂಕ್ ನಲ್ಲಿ ಪಡೆದಿರುವ ಸಾಲವನ್ನು ಮರುಪಾವತಿ ಮಾಡಲು ಅಸಹಾಯಕರಾಗಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರವು ಬೆಳೆಗಾರರ ನೆರವಿಗೆ ಧಾವಿಸಿ, ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ. (ವರದಿ: ಎಲ್.ಜಿ)

Leave a Reply

comments

Related Articles

error: