ಕರ್ನಾಟಕಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ 10 ಲಕ್ಷ ಸಸಿ ನೆಡಲು ಆದೇಶಿಸಿದ ನ್ಯಾಯಾಲಯ

ಬೆಂಗಳೂರು,ಜೂ.22- ಅಭಿವೃದ್ಧಿ ಹೆಸರಿನಲ್ಲಿ ಎಲ್ಲೆಡೆ ಮರಗಳನ್ನು ಕಡಿಯಲಾಗುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮರಗಳನ್ನು ಕಡಿಯುತ್ತಿರುವ ಕುರಿತಂತೆ ಬೆಂಗಳೂರಿನಲ್ಲಿ 10 ಲಕ್ಷ ಸಸಿಗಳನ್ನು ನೆಡಬೇಕು ಎಂದು ಹೈ ಕೋರ್ಟ್ ಆದೇಶಿಸಿದೆ.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಬಿಬಿಎಂಪಿ ಮರಗಳನ್ನು ಕಡಿದಿರುವುದನ್ನು ಸರಿದೂಗಿಸಲು 10 ಲಕ್ಷ ಸಸಿಗಳನ್ನು ನೆಡಬೇಕು ಎಂದು ಆದೇಶಿಸಿದೆ.

ಹೀಗಾಗಿ ಇನ್ನು ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಲಿದೆ. ಬೆಂಗಳೂರಿನಲ್ಲಿ ಹಸಿರು ಉಳಿಸುವ ನಿಟ್ಟಿನಲ್ಲಿ ನ್ಯಾಯಾಲಯ ನೀಡಿರುವ ಆದೇಶ ಸ್ವಾಗತಾರ್ಹ. (ವರದಿ-ಎಂ.ಎನ್)

 

Leave a Reply

comments

Related Articles

error: