ಮೈಸೂರು

ಆಹಾರ ಅರಸಿ ನಾಡಿಗೆ ಬರುತ್ತಿವೆ ಕಾಡಾನೆಗಳ ಹಿಂಡು

ಮೈಸೂರು(ಟಿ.ನರಸೀಪುರ)ಜೂ.22:- ಆಹಾರ ಹುಡುಕಿಕೊಂಡು  ಕಾಡಾನೆ ಹಿಂಡುಗಳು ನಾಡಿಗೆ ಬಂದಿವೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದ ಬಳಿ  ಕಾಡಾನೆಗಳು ಕಾಣಿಸಿಕೊಂಡಿವೆ.  ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸಪಡುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಕಾಡಿನಿಂದ ಬಂದಿರುವ ಕಾಡಾನೆಗಳು ಎನ್ನಲಾಗುತ್ತಿದೆ. ಅರಣ್ಯಾಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಯಿಂದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: