ಸುದ್ದಿ ಸಂಕ್ಷಿಪ್ತ

ಜೂ.23 ರಂದು ಸಬ್‍ಕಾ ಸಾಥ್ ಸಬ್‍ಕಾ ವಿಕಾಸ್ ಸಮ್ಮೇಳನ

ಮಡಿಕೇರಿ, ಜೂ.23: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ ಜೂನ್, 23 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಕ್ರಿಸ್ಟಲ್ ಕೋರ್ಟ್‍ನಲ್ಲಿ ಸಬ್‍ಕಾ ಸಾಥ್ ಸಬ್‍ಕಾ ವಿಕಾಸ್ ಸಮ್ಮೇಳನ ನಡೆಯಲಿದೆ.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ, ಭೂ ವಿಜ್ಞಾನ, ಪರಿಸರ, ಅರಣ್ಯ ಮತ್ತು  ಹವಾಮಾನ ಬದಲಾವಣೆ ಸಚಿವರಾದ ಡಾ.ಹರ್ಷವರ್ಧನ್, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದರಾದ ಪ್ರತಾಪ್ ಸಿಂಹ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಇತರರು ಪಾಲ್ಗೊಳ್ಳಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: