ಮೈಸೂರು

ರೈತರ ಸಾಲಮನ್ನಾ : ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಸಂಭ್ರಮಾಚರಣೆ

ಮೈಸೂರು,ಜೂ.23:-  ರೈತರ ಸಾಲಮನ್ನಾ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಲುವು ಸ್ವಾಗತಿಸಿ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಶುಕ್ರವಾರ ಎತ್ತಿನಗಾಡಿಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ  ಭಾವಚಿತ್ರವಿರಿಸಿ ಮೆರವಣಿಗೆ ಮಾಡಲಾಯಿತು. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.  ತಮಟೆ ನಗಾರಿಯ ಸದ್ದಿಗೆ ಕುಣಿದು ಕುಪ್ಪಳಿಸಿದರು.  ಹಿನಕಲ್ ಪ್ರಕಾಶ್ ಮಾತನಾಡಿ ಸಾಲದಿಂದ ಮುಕ್ತಗೊಂಡ ರಾಜ್ಯದ ರೈತರುಗಳು ನೆಮ್ಮದಿಯಿಂದ ಜೀವನ ಸಾಗಿಸಲು ರೈತರ ಪಾಲಿಗೆ ದಾರಿದೀಪವಾಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ  ಪರ ಜಯಘೋಷ ಕೂಗುತ್ತಾ ಎತ್ತಿನಗಾಡಿಗಳಲ್ಲಿ ಮೆರವಣಿಗೆ ಮೂಲಕ ರೈತರು ಸಾಗಿದರು. ಈ ಸಂದರ್ಭ ಮೈಸೂರು ನಗರಾಧ್ಯಕ್ಷ ಹೆಬ್ಬಾಳ್ ವಿಜಯ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಬ್ಬಾಳ್ ಚಂದ್ರು, ಜಿಲ್ಲಾಧ್ಯಕ್ಷ ಮುಳ್ಳೂರ್ ದೇವರಾಜ್, ಗುರುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: