ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ : ಟಿ.ಬಿ.ಜಯಚಂದ್ರ

ಬೆಂಗಳೂರು, ಜೂನ್ 22 : ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಭೂಸ್ವಾಧೀನ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ ತಿದ್ದುಪಡಿ ತರಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ತಿಳಿಸಿದ್ದಾರೆ.

ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಅಸ್ತಿತ್ವದಲ್ಲಿದ್ದ ಕೆಐಎಡಿಬಿ ಭೂ ಸ್ವಾಧೀನ ಕಾನೂನಿಗೆ ತಿದ್ದುಪಡಿ ಮಾಡಲಾಗುವುದು. ಹಲವು ವರ್ಷಗಳಿಂದ ಜಾರಿಯಲ್ಲಿದ್ದ ಭೂಸ್ವಾಧೀನ ಕಾನೂನಿನಲ್ಲಿ ಈವರೆಗೆ ಯಾವುದೇ ಪರಿಷ್ಕರಣೆ ಆಗಿಲ್ಲ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ ಎಂದು ಸಚಿವ ಜಯಚಂದ್ರ ತಿಳಿಸಿದರು.

-ಎನ್.ಬಿ.

Leave a Reply

comments

Related Articles

error: