ಮೈಸೂರು

ನಾಡೋಜ ಡಾ.ಪಾಟೀಲ್ ಪುಟ್ಟಪ್ಪನವರಿಗೆ ಅಭಿನಂದನಾ ಸಮಾರಂಭ

ಮೈಸೂರು. ಜೂ.23 : ಕರ್ನಾಟಕ ಏಕೀಕರಣ-60 ಸ್ಮರಣಾರ್ಥ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ.ಪಾಟೀಲ್ ಪುಟ್ಟಪ್ಪನವರಿಗೆ ಅಭಿನಂದನಾ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್ ತಿಳಿಸಿದರು.

ಶುಕ್ರವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ಜೂ 25ರ ಬೆಳಿಗ್ಗೆ 11.30ಕ್ಕೆ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ನಲ್ಲಿ‌ ನಡೆಯುವ ಅಭಿನಂದನಾ ಸಮಾರಂಭಕ್ಕೆ ಸಂಸದ ಧ್ರುವನಾರಾಯಣ ಚಾಲನೆ ನೀಡುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಕರ್ನಾಟಕ ಏಕೀಕರಣ-60 ಸ್ಮರಣಾರ್ಥ ನಡೆಯುತ್ತಿರುವ ಅಭಿನಂದನಾ ಸಮಾರಂಭದಲ್ಲಿ  ಮೈವಿವಿಯ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪರವರು ಅಭಿನಂದನಾ ಭಾಷಣ ಮಾಡುವರು,ಮುಖ್ಯ ಅತಿಥಿಗಳಾಗಿ ಸಂಪಾದಕ ರಾಜಶೇಖರ ಕೋಟಿ, ಮುಡಾ ಅಧ್ಯಕ್ಷ ಡಿ.ಧೃವಕುಮಾರ್, ಶಾಸಕ ಕಳಲೆ ಕೇಶವಮೂರ್ತಿ, ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು ಹಾಗೂ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಹೆಚ್.ಕೆ.ಬಸವರಾಜು, ಕಾರ್ಯದರ್ಶಿ ಪಿ.ಜಯಕುಮಾರ್, ಸಂಘಟನಾ ಕಾರ್ಯದರ್ಶಿ ಬಾಬು, ಸುರೇಶ್ ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: