ಕರ್ನಾಟಕ

ರಂಜಾನ್ ಹಬ್ಬದ ಪ್ರಯುಕ್ತ 500 ಹೆಚ್ಚುವರಿ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ

ಬೆಂಗಳೂರು, ಜೂನ್ 23 : ರಂಜಾನ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚುವರಿ 500 ವಿಶೇಷ ಬಸ್ ಗಳ ಸಂಚಾರ ಸೌಲಭ್ಯ ಕಲ್ಪಿಸಿದೆ.
ಜೂನ್ 23 ಮತ್ತು 24ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರು, ಶಿವಮೊಗ್ಗ, ಧರ್ಮಸ್ಥಳ, ಬೆಳಗಾವಿ, ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಿಗೆ ಬಸ್ ಗಳ ಹೊರಡಲಿವೆ. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬರಲು ಜೂ. 26 ರಂದು ವಿಶೇಷ ಬಸ್ ಗಳು ಸಂಚರಿಸಲಿವೆ.
ಮೈಸೂರು, ಮಡಿಕೇರಿ ಕಡೆ ಹೊರಡುವ ಬಸ್ ಗಳು ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ಹಾಗೂ ತಮಿಳುನಾಡು, ಆಂಧ್ರಪ್ರದೇಶದ ಕಡೆ ಸಂಚರಿಸುವ ಬಸ್ ಗಳು ಶಾಂತಿನಗರ ಟಿಟಿಎಂಸಿ ಬಸ್ ನಿಲ್ದಾಣದಿಂದ ತೆರಳಲಿವೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. (ವರದಿ: ಎಲ್.ಜಿ)

Leave a Reply

comments

Related Articles

error: