ಮೈಸೂರು

ಪಕ್ಷೇತರ ಅಭ್ಯರ್ಥಿ ಲಲನಾಧನರಾಜ್ ನಾಮಪತ್ರ ವಾಪಸ್

ಮೈಸೂರು, ಜೂ. 24- ಮಹಾನಗರಪಾಲಿಕೆಯ 32ನೇ ವಾರ್ಡ್‍ನ ಉಪಚುನಾವಣೆಗೆ ಸಲ್ಲಿಸಿದ್ದ ನಾಮಪತ್ರವನ್ನು ಪಕ್ಷೇತರ ಅಭ್ಯರ್ಥಿ ವಾಪಸ್ಸು ಪಡೆದಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಲಲನಾಧನರಾಜ್ ಅವರು ಶನಿವಾರ ತಮ್ಮ ಉಮೇದುವಾರಿಕೆಯನ್ನು ವಾಪಸ್ಸು ಪಡೆದುಕೊಂಡರು. ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು ಇದುವರೆಗೆ ಯಾವುದೇ ಸ್ಥಾನಮಾನ ನೀಡಿಲ್ಲವೆಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದರು. ಇದೀಗ  ಕಾಂಗ್ರೆಸ್ ಮುಖಂಡರ ಮನವಿ ಮೇರೆಗೆ ನಾಮಪತ್ರ ಹಿಂತೆಗೆದುಕೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್).

Leave a Reply

comments

Related Articles

error: